ದಕ್ಷಿಣ ಕೊರಿಯಾದ ಪ್ರತಿಪಕ್ಷ ನಾಯಕ ಲೀ ಜೇ-ಮ್ಯುಂಗ್ ಅವರು ಆಗ್ನೇಯ ಬಂದರು ನಗರ ಬುಸಾನ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಕುತ್ತಿಗೆಗೆ ಚಾಕು ಇರಿಯಲಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಪ್ರಮುಖ ಪ್ರತಿಪಕ್ಷ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥರಾಗಿರುವ ಲೀ ಅವರು ಪತ್ರಕರ್ತರ ಜೊತೆಪ್ರಶ್ನೋತ್ತರ ಅವಧಿಯಲ್ಲಿ ಭಾಗಿಯಾಗಿದ್ದಾಗ ದುಷ್ಕರ್ಮಿಯೋರ್ವ ಕುತ್ತಿಗೆಯ ಎಡಭಾಗಕ್ಕೆ ಚಾಕು ಇರಿದು ಕೊಲ್ಲಲು ಯತ್ನಿಸಿದ್ದಾನೆ ಎಂದು ದಕ್ಷಿಣ ಕೊರಿಯಾದ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.