ದಕ್ಷಿಣ ಶಿಕ್ಷಕರ ಕ್ಷೇತ್ರ : ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಆದೇಶ

 

ಬೆಂಗಳೂರು : ಕರ್ನಾಟಕ ದಕ್ಷಿಣ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧ ಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆಂದು ನಿರ್ದೇಶನ ನೀಡಲಾಗಿದೆ.

ಭಾರತ ಚುನಾವಣಾ ಆಯೋಗವು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೊಳಪಡುವ ವಿಭಾಗದ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲಾಧಿಕಾರಿಗಳನ್ನು, ಆಯುಕ್ತರು, ಮೈಸೂರು ಮಹಾನಗರಪಾಲಿಕ ಮೈಸೂರು, ಮೈಸೂರು ವಿಭಾಗದ ಆಯಾ ಉಪ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಉಪವಿಭಾಗಾಧಿಕಾರಿಗಳು, ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರರನ್ನು ಸಹಾಯಕ ಮತದಾರರ ನೊಂದಣಾಧಿಕಾರಿಯನ್ನಾಗಿ ನೇಮಿಸಿರುತ್ತದೆ. ಅರ್ಹತಾ ದಿನಾಂಕ 01.11.2023ಕ್ಕೆ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ.

ಭಾರತ ಚುನಾವಣಾ ಆಯೋಗವು ದಿನಾಂಕ: 09:08:2023ರ ಪತ್ರದನ್ವಯ ಕರ್ನಾಟಕ ದಕ್ಷಿಣ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ಧ ಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆಂದು ನಿರ್ದೇಶನ ನೀಡಿರುತ್ತಾರೆ.

ದಕ್ಷಿಣ ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಲು ಈ ಕೆಳಗಿನಂತೆ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read