ಬೆಂಗಳೂರು: ವಂದೇ ಭಾರತ್ ರೈಲು ಟಿಕೆಟ್ ದರದಲ್ಲಿ ಪರಿಷ್ಕರಣೆ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ನೈರುತ್ಯ ರೈಲ್ವೆ ಸ್ಪಷ್ಟಪಡಿಸಿದೆ.
ವಂದೇ ಭಾರತ್ ಸೇರಿದಂತೆ ದೇಶದ ಪ್ರಯಾಣಿಕ ರೈಲುಗಳ ಟಿಕೆಟ್ ದರ ಪರಿಷ್ಕರಣೆ ಮಾಡುವ ಬಗ್ಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದರು. ಅವರ ಹೇಳಿಕೆಗೆ ನೈರುತ್ಯ ರೈಲ್ವೆ ವಲಯ ಸ್ಪಷ್ಟನೆ ನೀಡಿದೆ.
ರಾಜ್ಯದ ಹಳ್ಳಿಗಳಿಗೆ ರೈಲು ಸಂಪರ್ಕ ಹೆಚ್ಚು ಮಾಡಿ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಪ್ರಯಾಣಿ ಸೌಲಭ್ಯ ಕಲ್ಪಿಸಲಾಗುತ್ತದೆ. ಜನಸಾಮಾನ್ಯರ ಅನುಕೂಲಕ್ಕಾಗಿ ರೈಲುಗಳಿಗೆ ಹೆಚ್ಚುವರಿಯಾಗಿ ಸಾಮಾನ್ಯ ಬೋಗಿಗಳನ್ನು ಅಳವಡಿಸುವ ಚಿಂತನೆ ಇದೆ. ವಂದೇ ಭಾರತ್ ರೈಲು ದರದಲ್ಲಿ ಪರಿಷ್ಕರಣೆ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ನೈರುತ್ಯ ರೈಲ್ವೆ ತಿಳಿಸಿದೆ.