alex Certify ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ರದ್ದು

ಬೆಂಗಳೂರು: ದಂಡು -ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆಯ ವಿವಿಧ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಜುಲೈ 30, ಆಗಸ್ಟ್ 6 ಮತ್ತು 13ರಂದು ಕೆಎಸ್ಆರ್ ಬೆಂಗಳೂರು –ಡಾ. ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಜುಲೈ 31, ಆಗಸ್ಟ್ 7 ಮತ್ತು 14 ರಂದು, ಡಾ. ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ -ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಮಾಡಲಾಗಿದೆ.

ಜುಲೈ 30, ಆಗಸ್ಟ್ 6 ಮತ್ತು 13 ರಂದು ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ ಡಾ. ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ -ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ವೈಟ್ಫೀಲ್ಡ್- ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ನಾಂದೇಡ್ ನಿಲ್ದಾಣದಿಂದ ಹೊರಡುವ ರೈಲು ನಾಂದೇಡ್ -ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲು ಯಲಹಂಕ ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದು ಮಾಡಲಾಗಿದೆ.

ಹುಬ್ಬಳ್ಳಿಯಿಂದ ಹೊರಡುವ ಎಸ್ಎಸ್ಎಸ್ ಹುಬ್ಬಳ್ಳಿ -ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ಪ್ರೆಸ್ ರೈಲು ಯಶವಂತಪುರ ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ಹೊಸಪೇಟೆಯಿಂದ ಹೊರಡುವ ಹೊಸಪೇಟೆ ಕೆಎಸ್ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಯಶವಂತಪುರ ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.

ಜುಲೈ 30, ಆಗಸ್ಟ್ 6 ಮತ್ತು 13 ರಂದು ಪ್ರಾರಂಭವಾಗುವ ರೈಲು ಸಂಖ್ಯೆ ಬೆಂಗಳೂರು -ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಎಸ್ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಇದು ಬೆಂಗಳೂರು ಕಂಟ್ರೋಲ್ಮೆಂಟ್ ನಲ್ಲಿ ನಿಲ್ಲುವುದಿಲ್ಲ ಎಂದು ನೈರುತ್ಯ ರೈಲ್ವೆ ಮಾಹಿತಿ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...