
ಬೆಂಗಳೂರು: ಜಯನಗರ ಕಾಂಗ್ರೆಸ್ ಪಕ್ಷದ ಶಾಸಕಿ ಸೌಮ್ಯ ರೆಡ್ಡಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜನವರಿ 20 ರಂದು ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ಸೌಮ್ಯ ರೆಡ್ಡಿ ಅವರು ಮಹಿಳಾ ಪೊಲೀಸ್ ಮೇಲೆ ಹಲ್ಲೆ ಮಾಡಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು.
ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ರಾಜಭವನ ಚಲೋ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಐಪಿಸಿ ಸೆಕ್ಷನ್ 323, 353ರ ಅಡಿ ಎಫ್ಐಆರ್ ದಾಖಲಾಗಿದೆ ಎಂದು ಹೇಳಲಾಗಿದೆ.