ಮಂಗಳೂರು: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಎಸ್.ಪಿ. ವಿಕ್ರಮ್ ಆಮಟೆ ಮಾಹಿತಿ ನೀಡಿದ್ದಾರೆ.
ವಿಕೆಟ್ ಅಥವಾ ಅದನ್ನು ಹೋಲುವ ಮರದ ತುಂಡಿನಿಂದ ಹಲ್ಲೆ ನಡೆಸಲಾಗಿದೆ. ಘಟನೆ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕಾಗಿ ಘಟನೆ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಎಂದು ತಿಳಿಸಿದ್ದಾರೆ.
ಹಲ್ಲೆಗೊಳಗಾದವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಗೊಳಗಾದವರಿಂದ ಹೆಚ್ಚಿನ ಮಾಹಿತಿ ಪಡೆಯಲಾಗುವುದು. ತಲ್ವಾರ್ ನಿಂದ ಹಲ್ಲೆ ನಡೆಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಿದಾಡಿದೆ. ಪ್ರಕರಣ ಪ್ರಸ್ತುತ ತನಿಖೆ ಹಂತದಲ್ಲಿದೆ ಎಂದು ಹೇಳಿದ್ದಾರೆ.