ಬೆಂಗಳೂರು: ರಾಜ್ಯ ಸರ್ಕಾರ ಶುಕ್ರವಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ಪರಶುರಾಮ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಕಮಿಷನರೇಟ್ ನಲ್ಲಿ ಗುಪ್ತಚರ ವಿಭಾಗದ ಡಿಸಿಪಿ ಆಗಿದ್ದ ಡಾ. ಅಶ್ವಿನಿ ಅವರನ್ನು ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.