
ಶಿರಸಿ: ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇತ್ತೀಚೆಗಷ್ಟೇ ಅವರು ಮಾಸ್ಕ್ ಧರಿಸದೆ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಭಾರಿ ಸುದ್ದಿಯಾಗಿತ್ತು.
ಮದುವೆಯಲ್ಲಿ ಮಾಸ್ಕ್ ಧರಿಸದೇ ಭಾಗಿಯಾಗಿದ್ದ ಕಾಗೇರಿ ಅವರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಂದ ಹಾಗೆ, ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಯಾವುದೇ ಲಕ್ಷಣಗಳು ಇಲ್ಲ. ಅವರು ಆರೋಗ್ಯವಾಗಿದ್ದಾರೆ ಎಂದು ಆಪ್ತಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. ಕೋವಿಡ್ ಮಾರ್ಗಸೂಚಿ ಅನ್ವಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ಸ್ಪೀಕರ್ ಕಾಗೇರಿ ಅವರ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಲಾಗಿದೆ.