ದಾವಣಗೆರೆ: ಭಗವದ್ಗೀತೆ ಕಡ್ಡಾಯವಾಗಿ ಕಲಿಸಬೇಕು ಎಂದು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ದಾವಣಗೆರೆಯಲ್ಲಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಆವರಣದಲ್ಲಿ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಗವದ್ಗೀತೆ ಶಾಲಾ ಪಠ್ಯವಾಗಬೇಕು. ಜೊತೆಗೆ ಅದನ್ನು ಕಡ್ಡಾಯವಾಗಿ ಕಲಿಸುವ ಸನ್ನಿವೇಶ ನಿರ್ಮಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಸರ್ಕಾರ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲು ಮುಂದಾಗುತ್ತಿರುವುದು ಶ್ಲಾಘನೀಯ. ಭಗವದ್ಗೀತೆಯ ಸಂದೇಶಗಳು ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿದ್ದು, ಗಡಿ. ಜಲ. ಭಾಷೆ ಇತರೆ ವಿಚಾರಗಳಲ್ಲಿ ಜನರಲ್ಲಿ ಏಕತೆ ಮೂಡಿಸಲು ಭಗವದ್ಗೀತೆಯ ಮಾರ್ಗದರ್ಶನ ಅವಶ್ಯಕ ಎಂದು ಹೇಳಿದ್ದಾರೆ.