ಬೆಳಗಾವಿ: ನಾಳೆಯಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಕೋವಿಡ್ ಮಾರ್ಗಸೂಚಿಯಂತೆ ಅಧಿವೇಶನ ನಡೆಯಲಿದೆ. ಸುಗಮವಾಗಿ ಕಲಾಪ ನಡೆಯುವ ವಿಶ್ವಾಸವಿದ್ದು, ಎಲ್ಲಾ ಶಾಸಕರು ಕಲಾಪದಲ್ಲಿ ಭಾಗವಹಿಸಲು ಎಂದು ಹೇಳಿದ್ದಾರೆ.
ನಿಯಮಾನುಸಾರ ಎಲ್ಲರಿಗೂ ಮಾತನಾಡಲು ಅವಕಾಶ ನೀಡಲಾಗುತ್ತದೆ. ಎಲ್ಲ ಶಾಸಕರು ಅಧಿವೇಶನದಲ್ಲಿ ಭಾಗಿಯಾಗಬೇಕೆಂದು ಎಲ್ಲ ಪಕ್ಷಗಳ ಶಾಸಕರಿಗೆ ಸ್ಪೀಕರ್ ಮನವಿ ಮಾಡಿದ್ದಾರೆ.
ಅಧಿವೇಶನದ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸುಮಾರು 75 ಕ್ಕೂ ಅಧಿಕ ಸಂಘಟನೆಗಳು, ಸಂಘ ಸಂಸ್ಥೆಗಳು ಹೋರಾಟ ಕೈಗೊಂಡಿವೆ.
ಸುವರ್ಣಸೌಧಕ್ಕೆ ರೈತರು ಮುತ್ತಿಗೆ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿವರ್ಷ ಸದನ ನಡೆಯುವ ವೇಳೆ ಸಮಸ್ಯೆ ಇದೆ ಎಂದು ಜನ ಬರುತ್ತಾರೆ. ಪ್ರತಿಭಟನೆ ನಡೆಸುತ್ತಾರೆ. ಅವರನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.