alex Certify ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಅಚ್ಚರಿ ಆಯ್ಕೆ: ಸಭಾಧ್ಯಕ್ಷರಾಗಿ ಯು.ಟಿ. ಖಾದರ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಅಚ್ಚರಿ ಆಯ್ಕೆ: ಸಭಾಧ್ಯಕ್ಷರಾಗಿ ಯು.ಟಿ. ಖಾದರ್…?

ಬೆಂಗಳೂರು: ವಿಧಾನಸಭೆಯ ಅಧ್ಯಕ್ಷರಾಗಲು ಹಿರಿಯ ಶಾಸಕರು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಹಿರಿಯ ಶಾಸಕರಾದ ಆರ್.ವಿ. ದೇಶಪಾಂಡೆ, ಹೆಚ್.ಕೆ. ಪಾಟೀಲ್, ಬಸವರಾಜ ರಾಯರೆಡ್ಡಿ. ಬಿ.ಆರ್. ಪಾಟೀಲ್, ಕೆ.ಎನ್. ರಾಜಣ್ಣ ಮೊದಲಾದವರ ಹೆಸರುಗಳು ಸ್ಪೀಕರ್ ಸ್ಥಾನಕ್ಕೆ ಕೇಳಿ ಬಂದಿದೆ. ಆದರೆ, ಅವರು ಸ್ಪೀಕರ್ ಸ್ಥಾನ ಒಪ್ಪಿಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಯು.ಟಿ. ಖಾದರ್ ಅವರನ್ನು ಆಯ್ಕೆ ಮಾಡಲು ಚಿಂತನೆ ನಡೆದಿದೆ.

ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಬೆಂಗಳೂರಿಗೆ ಆಗಮಿಸಿ ಸ್ಪೀಕರ್ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮಂಗಳವಾರ ಮಧ್ಯಾಹ್ನ 12 ಗಂಟೆವರೆಗೆ ಕಾಲಾವಕಾಶವಿದ್ದು, ಬಹುತೇಕ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...