alex Certify ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ

ಬೆಂಗಳೂರು: ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣೆ ಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾ. ಜೆ. ಪ್ರೀತ್ ಆದೇಶಿಸಿದ್ದಾರೆ.

ಚುನಾವಣಾ ಅಧಿಕಾರಿ ಮಹಾಂತೇಶ್ ಅವರು ಖಾಸಗಿ ದೂರು ದಾಖಲಿಸಿದ್ದರು. ಬೆಳಗಾವಿಯ ಹಿಂಡಲಗಾದಲ್ಲಿ ಸಚಿವರು ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ಸಭೆ ನಡೆಸಿದ ಆರೋಪ ಕೇಳಿ ಬಂದಿತ್ತು. ಏಪ್ರಿಲ್ 30 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...