alex Certify BIG NEWS : ಆ.27 ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು |Govt Employee | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಆ.27 ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು |Govt Employee

ಬೆಂಗಳೂರು : ಆ.27 ರಂದು ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ ಹೊರಡಿಸಿದೆ.

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು 2:27.08.20240 ಮಂಗಳವಾರದಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, ಸದರಿ ಪರೀಕ್ಷೆಗೆ ಅನುವಾಗುವ 214 ಸರ್ಕಾರಿ, 189 ಅನುದಾನಿತ ಮತ್ತು 161 ಶಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ, ಒಟ್ಟಾರೆ 564 ಪರೀಕ್ಷಾ ಉಪ ಕೇಂದ್ರಗಳಿಗೆ, ಅನ್ವಯಿಸಿದಂತೆ ಒಂದು ದಿನದ (ದಿನಾಂಕ: 27.08.2024) ವಿಶೇಷ/ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಸದರಿ ದಿನಾಂಕವನ್ನು ಸಾರ್ವತ್ರಿಕ ರಜೆಯನ್ನಾಗಿ Negotiable Instrument Act 1881ರ ಅಡಿಯಲ್ಲಿ ಘೋಷಿಸಲಾಗಿದೆ.ಮುಂದುವರೆದು, ಮೇಲೆ ತಿಳಿಸಿರುವ ಪರೀಕ್ಷಾ ಉಪ ಕೇಂದ್ರಗಳಲ್ಲಿ ದಿನಾಂಕ:27.08.2024ರಂದು ಯಾವುದೇ ಶೈಕ್ಷಣಿಕ ಪರೀಕ್ಷೆಗಳು ಹಾಗೂ ಇನ್ನಿತರೆ ಪೂರ್ವನಿರ್ಧರಿತ ಕಾರ್ಯಕ್ರಮಗಳು ನಿಗದಿಯಾಗಿದ್ದಲ್ಲಿ ಸೂಕ್ತ ಕ್ರಮಕೈಗೊಂಡು ಪ್ರಸಕ್ತ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ನಡೆಸಲು ಅಡಚಣೆಯಾಗದಿರುವುದನ್ನು ಸಂಬಂಧಿತ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು/ಆಡಳಿತ ಮಂಡಳಿಯು ಖಾತರಿ ಪಡಿಸುವುದು.

ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಪದವಿಪೂರ್ವ ಇಲಾಖೆ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವಂತಹ ಶೈಕ್ಷಣಿಕ ಸಂಸ್ಥೆಗಳಿಗೆ ಈ ಆದೇಶವನ್ನು ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡುವುದು. ಮುಂದುವರೆದು, ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸದರಿ ಪರೀಕ್ಷೆಯನ್ನು ಯಾವುದೇ ಅಡಚಣೆ ಉಂಟಾಗದಂತೆ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಸಂಪೂರ್ಣ ಸಹಕಾರ ನೀಡುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...