‘ಮತದಾರರ ಪಟ್ಟಿ’ ವಿಶೇಷ ಪರಿಷ್ಕರಣೆ ಆರಂಭ: ಹೆಸರು ಸೇರ್ಪಡೆ ಹಾಗೂ ತೆಗೆಯಲು ಸಿಗಲಿದೆ ಅವಕಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯು ಆಗಸ್ಟ್ 20 ರಿಂದ ಅಕ್ಟೋಬರ್ 18 ರವರೆಗೆ ನಡೆಯಲಿದ್ದು ಬಿಎಲ್‌ಒ ತಂತ್ರಾಂಶದ ಮೂಲಕ ಮನೆ-ಮನೆ ಸಮೀಕ್ಷೆ ಪ್ರಾರಂಭಿಸಲಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತೆಗೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾಹಿತಿ ನೀಡಿದ ಅವರು, ಆಗಸ್ಟ್ 20 ರಿಂದ ಮತದಾರರ ಪಟ್ಟಿ ಪರಿಷ್ಕರಣೆಯ ಎಲ್ಲ ಕಾರ್ಯಚಟುವಟಿಕೆಗಳು ಶುರುವಾಗಿವೆ. ಪ್ರತಿ ವರ್ಷ ಜನವರಿ 01 ಕ್ಕೆ 18 ವರ್ಷ ಪೂರೈಸಿರುವವರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತದೆ. ಅದರಂತೆ ಬೂತ್‌ ಮಟ್ಟದ ಅಧಿಕಾರಿಗಳು ಅಕ್ಟೋಬರ್ 18 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ ಎಂದು ಹೇಳಿದರು.

ಮನೆ ಮನೆ ಸಮೀಕ್ಷೆ ವೇಳೆ ಬೂತ್‌ ಮಟ್ಟದಲ್ಲಿ ಹೊಸ ಮನೆಗಳು ನಿರ್ಮಾಣಗೊಂಡು ಅಲ್ಲಿ ಜನ ವಾಸವಿದ್ದರೆ ಅಥವಾ ಅಲ್ಲಿಂದ ಬೇರೆಡೆ ಸ್ಥಳಾಂತರಗೊಂಡವರ ಮಾಹಿತಿ ಸಂಗ್ರಹಿಸಿ, ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಬೇರೆಡೆಗೆ ಸ್ಥಳಾಂತರಗೊಂಡವರು ಹಾಗೂ ಮೃತಪಟ್ಟವರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುವುದು. ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಮನೆ ಮನೆ ಭೇಟಿ ನೀಡುವ ಬಿಎಲ್ಒಗಳಿಗೆ ಅಗತ್ಯ ಮಾಹಿತಿಯನ್ನು ನೀಡಿ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read