alex Certify BIG NEWS: ಕ್ರಿಸ್ ಮಸ್ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಕಲಬುರಗಿ-ಮಂಗಳೂರಿಗೆ ವಿಶೇಷ ರೈಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ರಿಸ್ ಮಸ್ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಕಲಬುರಗಿ-ಮಂಗಳೂರಿಗೆ ವಿಶೇಷ ರೈಲು

ಬೆಂಗಳೂರು: ಕ್ರಿಸ್ ಮಸ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಇಲಾಖೆ ವಿಶೇಷ ರೈಲು ಸೇವೆ ಕಲ್ಪಿಸಿದೆ.

ಕ್ರಿಸ್​ಮಸ್​ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ಬೆಂಗಳೂರು-ಕಲಬುರಗಿ ಮತ್ತು ಯಶವಂತಪುರ-ಮಂಗಳೂರು ಮಾರ್ಗಗಳಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.

ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು-ಕಲಬುರಗಿ ಮತ್ತು ಯಶವಂತಪುರ-ಮಂಗಳೂರು ನಿಲ್ದಾಣಗಳ ನಡುವೆ ಎರಡೂ ದಿಕ್ಕಿನಲ್ಲಿ ಎರಡು ಟ್ರಿಪ್​ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಸಂಚರಿಸಲಿದೆ.

ರೈಲು ವಿವರ:
ರೈಲು ಸಂಖ್ಯೆ 06533 ಎಸ್‌ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 24 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಟು, ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.
ಪುನಃ ಇದೇ ರೈಲು (06590) ಕಲಬುರಗಿಯಿಂದ ಡಿಸೆಂಬರ್ 25 ರಂದು ಬೆಳಿಗ್ಗೆ 9.34ಕ್ಕೆ ಹೊರಟು, ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.
ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ.

ಯಶವಂತಪುರ-ಮಂಗಳೂರು ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55 ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಮರಳಿ, ಇದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.
ಈ ರೈಲು ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139 ನಂಬರ್​ಗೆ ಕರೆ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...