ವೇಗವಾಗಿ ಬಂದ ಕಾರೊಂದು ನಿಯಂತ್ರಣ ಕಳೆದುಕೊಂಡು ಪಾದಚಾರಿಗಳನ್ನ ಗುದ್ದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಜನವರಿ 19ರ, ಬುಧವಾರದಂದು ಕರ್ನೂಲ್ ನಲ್ಲಿ ಈ ಘಟನೆ ನಡೆದಿದ್ದು, ಕನಿಷ್ಠ ಮೂವರು ಪಾದಚಾರಿಗಳು ಗಾಯಗೊಂಡಿದ್ದಾರೆಂದು ವರದಿಯಾಗಿದೆ.
ಕರ್ನೂಲಿನ ವಿಸಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ಸಂಪೂರ್ಣ ಘಟನೆಯು ಆ ಪ್ರದೇಶದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿಯಂತ್ರಣ ಕಳೆದುಕೊಂಡು ವೇಗವಾಗಿ ರಸ್ತೆಯಲ್ಲಿ ಮುನ್ನುಗ್ಗುತ್ತಿದ್ದ ಕಾರೊಂದು ಮೊದಲ ಆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳನ್ನ ಗುದ್ದಿದೆ. ಅಷ್ಟೇ ಅಲ್ಲಾ ಅದೇ ರಸ್ತೆಯಲ್ಲಿ ನಿಂತಿದ್ದ ಬೈಕ್ ಅನ್ನು ಗುದ್ದಿದೆ.
ಬಟ್ಟೆಗಿಂತ ಈ ಮಾಸ್ಕ್ ಸುರಕ್ಷಿತ: ಎನ್ 95 ಮಾಸ್ಕ್ ಗಳ ಬಳಕೆಗೆ ಸಲಹೆ ನೀಡಿದ ಸಿಡಿಸಿ
ಅಪಘಾತವಾಗುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಧಾವಿಸಿದ ಸುತ್ತಮುತ್ತಲಿದ್ದ ಜನರು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯಾರಿಗು ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.