
ದೇಶಾದ್ಯಂತ ವೇಗದ ಚಾಲನೆಯಿಂದ ಸಂಭವಿಸಿದ ಅಪಘಾತಗಳ ಸರಣಿಯಲ್ಲಿ ಅಮಾಯಕರು ಬಲಿಯಾಗಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಶುಕ್ರವಾರ ರಾತ್ರಿ, ಹರ್ಮಡಾ ಪ್ರದೇಶದಲ್ಲಿ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು ರಸ್ತೆ ದಾಟುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಯುವತಿ ಸುಮಾರು 20 ಅಡಿ ದೂರಕ್ಕೆ ಚಿಮ್ಮಿ ನೆಲಕ್ಕೆ ಬಿದ್ದಿದ್ದಾಳೆ. ಗಂಭೀರ ಗಾಯಗೊಂಡ ಯುವತಿಯನ್ನು ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೇ ರೀತಿಯ ಘಟನೆಗಳು ಇತ್ತೀಚೆಗೆ ಗುಜರಾತ್ ಮತ್ತು ಉತ್ತರಾಖಂಡದಲ್ಲಿ ನಡೆದಿವೆ. ಗುಜರಾತ್‌ನ ವಡೋದರಾದಲ್ಲಿ 20 ವರ್ಷದ ಕಾನೂನು ವಿದ್ಯಾರ್ಥಿ ರಕ್ಷಿತ್ ಚೌರಾಸಿಯಾ ಕಾರು ಚಲಾಯಿಸಿ ನಾಲ್ವರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದ.
ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಚೌರಾಸಿಯಾ ಕುಡಿದ ಮತ್ತಿನಲ್ಲಿ “ಮತ್ತೊಂದು ರೌಂಡ್” ಎಂದು ಕೂಗಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮಾರ್ಚ್ 12 ರಂದು, 22 ವರ್ಷದ ವಂಶ್ ಕಟ್ಯಾಲ್ ಮರ್ಸಿಡಿಸ್ ಕಾರು ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕಟ್ಯಾಲ್, ಅಪಘಾತದ ನಂತರ ಪರಾರಿಯಾಗಿದ್ದನು.