alex Certify BIG NEWS: ಎಸ್ ಪಿ ಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣ; ವೈದ್ಯ ಸೇರಿ ಐವರ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಸ್ ಪಿ ಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣ; ವೈದ್ಯ ಸೇರಿ ಐವರ ವಿರುದ್ಧ FIR ದಾಖಲು

ಹೊಸಕೋಟೆ: ಹೊಸಪೇಟೆಯ ಎಸ್ ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಸೇರಿ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮಂಡ್ಯದಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿಯಲ್ಲಿರುವ ಎಸ್ ಪಿ ಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ನಡೆಯುತ್ತಿರುವ ಬಗ್ಗೆ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಆಸ್ಪತ್ರೆಯ ವೈದ್ಯ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ವೈದ್ಯ ಶ್ರೀನಿವಾಸ್, ನರ್ಸ್ ಗಳಾದ ಅನಿತಾ, ನೇತ್ರಾ, ರೇವತಿ ಹಾಗೂ ರಾಧಿಕಾ ಎಂಬುವವರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ವೈದ್ಯನಿಗಾಗಿ ಶೋಧ ಕಾರ್ಯ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...