![](https://kannadadunia.com/wp-content/uploads/2023/12/Feticide-case.jpg)
ಹೊಸಕೋಟೆ: ಎಸ್ ಪಿಜಿ ಅಸ್ಪತ್ರೆಯಲ್ಲಿ ಭ್ರೂಣಹತ್ಯೆ ಪ್ರಕರಣಕ್ಕೆ ಸಣ್ಬಂಧಿಸಿದಂತೆ ಬಂಧಿತ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೆಂಗಳೂರು ಗ್ರಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್ ಪಿಜಿ ಆಸ್ಪತ್ರೆಯಲ್ಲಿ ನಡೆದಿದ್ದ ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಾದ ಅನಿತಾ, ನೇತ್ರಾ, ರೇವತಿ ಹಾಗೂ ರಾಧಿಕಾ ಅವರನ್ನು ಇಂದು ಪೊಲೀಸರು ಹೊಸಕೋಟೆ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಆರೊಪಿಗಳನ್ನು 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ.
ಆಸ್ಪತ್ರೆಯ ವೈದ್ಯ ಶ್ರೀನಿವಾಸ್ ಮಾತಿನಂತೆ ಭ್ರೂಣಹತ್ಯೆಗೆ ಸಹಕರಿಸಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದರು. ಹೀಗಾಗಿ ನಾಲ್ವರನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇನ್ನು ಪ್ರಮುಖ ಆರೋಪಿ ಡಾ.ಶ್ರೀನಿವಾಸ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ನಡೆಸಲಾಗಿದೆ.