ದಾವಣಗೆರೆ: ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಬೆಂಗಳೂರು ವಿದ್ಯಾನಗರದ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರವನ್ನು ರಾಜ್ಯ ಉತ್ಕೃಷ್ಟತಾ ಕೇಂದ್ರ(ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಿದೆ.
ಈ ಕೇಂದ್ರಕ್ಕೆ ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಅಧಾರದ ಮೇಲೆ Physiotherapist Grade II ಮತ್ತು Sports Masseur (1 Men & 1 Women) ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ದಾವಣಗೆರೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಾರ್ಯಾಲಯ ಜಿಲ್ಲಾ ಕ್ರೀಡಾಂಗಣ ಇಲ್ಲಿ ಕಚೇರಿ ವೇಳೆಯಲ್ಲಿ ಪಡೆದು, ಭರ್ತಿ ಮಾಡಿದ ನಮೂನೆಯನ್ನು ಜೂ.28 ರ ಒಳಗಾಗಿ ಸಲ್ಲಿಸಬಹುದು ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 08192-237480 ಯನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.