ಉಡುಪಿ: ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇಕಡ 2ರಷ್ಟು ಮೀಸಲಾತಿ ಕಲ್ಪಿಸಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಮತ್ತು ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆ, ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆ ಜಂಟಿ ಆಶ್ರಯದಲ್ಲಿ ಅಜ್ಜರ ಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಹಿರಿಯರ ಮತ್ತು ಯೂತ್ ಅಥ್ಲೆಟಿಕ್ ಮೀಟ್ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಕ್ರೀಡೆಗೆ ಶೇಕಡ 2ರಷ್ಟು ಮೀಸಲಾತಿ ಕಲ್ಪಿಸಲಾಗಿದ್ದು, ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿಯೂ ಶೇಕಡ 2ರಷ್ಟು ಕ್ರೀಡಾಪಟುಗಳಿಗೆ ಮೀಸಲಿಡಲು ಸಂಪುಟದಲ್ಲಿ ನಿರ್ಧರಿಸಲಾಗಿದೆ. ಪೊಲೀಸ್ ಇಲಾಖೆಯ ಎಲ್ಲಾ ನೇಮಕಾತಿಗಳನ್ನು ಮೀಸಲಾತಿ ಕಲ್ಪಿಸಿದ್ದು, ಪೊಲೀಸ್ ಇಲಾಖೆಗೆ ಮಾತ್ರ ಸೀಮಿತಗೊಳಿಸದೆ ಉಳಿದ ಎಲ್ಲಾ ಇಲಾಖೆಗಳಲ್ಲಿಯೂ ಮೀಸಲಾತಿ ತರಲಾಗುವುದು. ಕ್ರೀಡೆಗಳಲ್ಲಿ ವಿದ್ಯಾರ್ಥಿ ತೊಡಗಿಕೊಳ್ಳುವ ವಿದ್ಯಾರ್ಥಿಗಳಿಗೆ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.