ನವದೆಹಲಿ: ರಷ್ಯಾದ ಕೊರೋನಾ ಲಸಿಕೆ ಸ್ಪುಟ್ನಿಕ್ ವಿ ಜೂನ್ 15 ರಿಂದ ದೆಹಲಿಯ ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆಯಲ್ಲಿ ಲಭ್ಯವಿರಲಿದೆ.
ಅಪೋಲೋ ಆಸ್ಪತ್ರೆಯಲ್ಲಿ ಸ್ಪುಟ್ನಿಕ್ ವಿ ಲಸಿಕೆಯನ್ನು ನೀಡಲಿದ್ದು, ನೋಂದಾವಣೆ ಮಾಡಿಸಿಕೊಂಡವರಿಗೆ ಲಸಿಕೆ ಲಭ್ಯವಿರಲಿದೆ ಎಂದು ಹೇಳಲಾಗಿದೆ.
ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅನುಮೋದನೆ ಲಸಿಕೆ ಬಳಕೆಗೆ ಅನುಮೋದನೆ ನೀಡಿದೆ. ದೇಶದಲ್ಲಿ ಕೋವಿಡ್ ವಿರುದ್ಧ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ನೀಡುತ್ತಿದ್ದು, ಸ್ಪುಟ್ನಿಕ್ ಲಸಿಕೆಯ ಮೊದಲ ಪ್ರಮಾಣವನ್ನು ಕಳೆದ ತಿಂಗಳು ಹೈದರಾಬಾದ್ ನಲ್ಲಿ ನೀಡಲಾಗಿತ್ತು.
ರಷ್ಯಾದ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಈ ಲಸಿಕೆ ಶೇಕಡ 91.6 ರಷ್ಟು ಪರಿಣಾಮಕಾರಿಯಾಗಿದೆ. ಇದು ಭಾರತದಲ್ಲಿ ಲಭ್ಯವಿರುವ ಕೋವಿಡ್ ಲಸಿಕೆಗಳಲ್ಲಿ ಅತಿ ಹೆಚ್ಚು ಪರಿಣಾಮಕಾರಿಯಾದುದು ಎಂದು ಹೇಳಲಾಗಿದೆ.
ಅಪೊಲೊ ಆಸ್ಪತ್ರೆಗಳು ಮತ್ತು ಡಾ. ರೆಡ್ಡಿ ಲ್ಯಾಬೊರೇಟರೀಸ್ ಮೊದಲ ಹಂತದ ಸ್ಪುಟ್ನಿಕ್ ವಿ ರೋಲ್ ಔಟ್ ಅನ್ನು ಪ್ರಾಯೋಗಿಕ ಆಧಾರದ ಮೇಲೆ ಮೇ 17 ರಂದು ಹೈದರಾಬಾದ್‌ನಲ್ಲಿ ಮತ್ತು ಮೇ 18 ರಂದು ವಿಶಾಖಪಟ್ಟಣಂನಲ್ಲಿ ಪ್ರಾರಂಭಿಸಿವೆ. ಈ ಲಸಿಕೆ ಹೈದರಾಬಾದ್ ಸೇರಿ ವಿವಿಧೆಡೆ ಆಸ್ಪತ್ರೆಗಳಲ್ಲಿ ಲಭ್ಯವಿದ್ದು, ದೆಹಲಿ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿಯೂ ನಾಳೆಯಿಂದ ಲಭ್ಯವಿರಲಿದೆ.