
ಬಾಗಲಕೋಟೆ: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್. ಪಾಟೀಲ್ ಅವರಿಗೆ ಟಿಕೆಟ್ ಕೈತಪ್ಪಿದೆ.
ಬಾಗಲಕೋಟೆ ಜಿಲ್ಲೆಯ ಸ್ವಕ್ಷೇತ್ರ ಬೀಳಗಿ ಹಾಗೂ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಆರ್. ಪಾಟೀಲ್ ಉತ್ತರ ಕರ್ನಾಟಕದ ಪ್ರಭಾವಿ ರಾಜಕಾರಣಿಯಾಗಿದ್ದಾರೆ. ಹಿರಿಯ ನಾಯಕರಾದ ಅವರನ್ನು ನಿರ್ಲಕ್ಷಿಸಿರುವುದು ಬೆಂಬಲಿಗರಲ್ಲಿ ಬೇಸರ ತರಿಸಿದೆ.
ಕಾಂಗ್ರೆಸ್ ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲಿ ಬೀಳಗಿಯಿಂದ ಜೆ.ಟಿ. ಪಾಟೀಲ್, ಮೂರನೇ ಪಟ್ಟಿಯಲ್ಲಿ ದೇವರಹಿಪ್ಪರಗಿಯಿಂದ ಶರಣಪ್ಪ ಸುಣಗಾರ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದೆ. ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಆರ್. ಪಾಟೀಲ್ ಕಾಂಗ್ರೆಸ್ ಟಿಕೆಟ್ ನಿಂದ ವಂಚಿತರಾಗಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಬೆಂಬಲಿಗರು, ಹಿತೈಷಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಎಸ್.ಆರ್. ಪಾಟೀಲ್ ಘೋಷಣೆ ಮಾಡಿದ್ದಾರೆ.