ಬೆಂಗಳೂರು: ಗುಬ್ಬಿ ಕ್ಷೇತ್ರದ ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಈಗಾಗಲೇ ಜೆಡಿಎಸ್ ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. 2018 ರಲ್ಲಿ ಗುಬ್ಬಿ ಕ್ಷೇತ್ರದಿಂದ ಜೆಡಿಎಸ್ ನಿಂದ ಅವರು ಆಯ್ಕೆಯಾಗಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಜೆಡಿಎಸ್ ನಿಂದ ಉಚ್ಛಾಟಿತರಾಗಿದ್ದ ಅವರು ಇತ್ತೀಚೆಗಷ್ಟೇ ಸ್ಪೀಕರ್ ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಜೆಡಿಎಸ್ ಸೇರಲಿದ್ದಾರೆ.