alex Certify BIG NEWS: ಬಿಜೆಪಿ ನಾಯಕರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಶ್ರೀರಾಮುಲು, ನಮ್ಮವರೇ ಸೋಲಿಸಿದ್ರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ನಾಯಕರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಶ್ರೀರಾಮುಲು, ನಮ್ಮವರೇ ಸೋಲಿಸಿದ್ರು

ಚಿತ್ರದುರ್ಗ: ಬಾದಾಮಿ ಕ್ಷೇತ್ರದಲ್ಲಿ ನನ್ನನ್ನು ಬಿಜೆಪಿ ನಾಯಕರೇ ಸೋಲಿಸಿದರು. ಕ್ಷೇತ್ರದ ಮತದಾರರು ನನ್ನನ್ನು ಸೋಲಿಸಿಲ್ಲ. ಬದಲಿಗೆ ಬಿಜೆಪಿಯವರೇ ಸೋಲಿಸಿದರು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಮಾತನಾಡಿದ ಅವರು, ಬಾದಾಮಿ ಕ್ಷೇತ್ರದಲ್ಲಿ ನನ್ನನ್ನು ಬಿಜೆಪಿ ನಾಯಕರೇ ಸೋಲಿಸಿದರು. ಕ್ಷೇತ್ರದ ಮತದಾರರು ಸೋಲಿಸಿಲ್ಲ. ವಾಲ್ಮೀಕಿ ನಾಯಕ ಸಮಾಜದ ಸಣ್ಣ ಕುಲದ ಶ್ರೀರಾಮುಲು ಗೆದ್ದರೆ ನಮಗೆ ಮುಳ್ಳಾಗುತ್ತಾನೆ ಎಂದು ಬಿಜೆಪಿ ನಾಯಕರು ನನ್ನನ್ನು ಸೋಲಿಸಿದರು ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ, ಅಮಿತ್ ಶಾ ಅವರಂಥವರು ಮಾತ್ರ ಎರಡು ಕಡೆ ಸ್ಪರ್ಧಿಸುತ್ತಾರೆ. ನಮ್ಮ ಪಕ್ಷದ ವರಿಷ್ಠರು ನನಗೂ ಎರಡು ಕಡೆ ಸ್ಪರ್ಧೆಗೆ ಅವಕಾಶ ನೀಡಿದ್ದರು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...