ಬೆಂಗಳೂರು: ಬಿಟ್ ಕಾಯಿನ್ ಕಳವು ಕೇಸ್ ನಲ್ಲಿ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಲಾಗಿದೆ. 2017ರಲ್ಲಿ ತುಮಕೂರಿನ ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
1 ಕೋಟಿ 14 ಲಕ್ಷ ರೂಪಾಯಿ ಮೌಲ್ಯದ 60.6 ಬಿಟ್ ಕಾಯಿನ್ ಕಳವು ಮಾಡಲಾಗಿತ್ತು. ಶ್ರೀಕಿ ಲ್ಯಾಪ್ಟಾಪ್ ಪರಿಶೀಲಿಸಿದಾಗ ಬಿಟ್ ಕಾಯಿನ್ ಕಳವು ಮಾಡಿರುವುದು ದೃಢಪಟ್ಟಿತ್ತು. ಯುನೋ ಕಾಯಿನ್ ಟೆಕ್ನಾಲಜೀಸ್ ಪ್ರೈ.ಲಿ. ಗ್ರಾಹಕರಿಗೆ ಸೇರಿದ ಬಿಟ್ ಕಾಯಿನ್ ಗಳನ್ನು ಕಳವು ಮಾಡಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಶ್ರೀಕಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಬಳ್ಳಾರಿ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ಇಂದು ಬೆಳಗ್ಗೆ ಶ್ರೀಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ.