ಕಳೆದ ವರ್ಷ ಟಿ20 ವಿಶ್ವಕಪ್ ನಲ್ಲಿ ಆಡಲು ಆಸ್ಟ್ರೇಲಿಯಾಗೆ ತೆರಳಿದ್ದ ವೇಳೆ ಶ್ರೀಲಂಕಾ ಕ್ರಿಕೆಟಿಗ ಧನುಷ್ಕ ಗುಣತಿಲಕ ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿತ್ತು.
ಈ ಹಿನ್ನಲೆಯಲ್ಲಿ ವಿಚಾರಣೆ ಪೂರ್ಣಗೊಳ್ಳುವವರೆಗೂ ಧನುಷ್ಕ ಗುಣತಿಲಕ ಆಸ್ಟ್ರೇಲಿಯಾದಲ್ಲಿ ಇರಬೇಕಾಗಿದ್ದು, ಹೀಗಾಗಿ ತಂಡದ ಇತರೆ ಆಟಗಾರರು ಅವರನ್ನು ಬಿಟ್ಟು ತವರಿಗೆ ತೆರಳಿದ್ದರು.
ಆಸ್ಟ್ರೇಲಿಯಾದಲ್ಲಿ ಉಳಿದಿರುವ ಧನುಷ್ಕ ಗುಣತಿಲಕ ಅವರಿಗೆ ರಾತ್ರಿ ಕರ್ಫ್ಯೂ ಸೇರಿದಂತೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿತ್ತು. ಇದೀಗ ಸಿಡ್ನಿ ಮ್ಯಾಜಿಸ್ಟ್ರೇಟ್ ಕೋರ್ಟ್ ಒಂದಷ್ಟು ರಿಲೀಫ್ ನೀಡಿದ್ದು, ಸಾಮಾಜಿಕ ಜಾಲತಾಣ ವಾಟ್ಸಾಪ್ ಬಳಕೆಗೆ ಅವಕಾಶ ನೀಡಲಾಗಿದೆ. ಅಲ್ಲದೆ ರಾತ್ರಿ ಕರ್ಫ್ಯೂವನ್ನು ತೆರವುಗೊಳಿಸಲಾಗಿದೆ.
ಜಾಮೀನು ಷರತ್ತು ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಕಾರಣಕ್ಕೆ ಈವರೆಗೆ ಆ ಸಮಯದಲ್ಲಿ ಕೊಠಡಿ ಬಿಟ್ಟು ಹೊರ ಹೋಗಬಾರದೆಂಬ ನಿಯಮವೂ ರದ್ದಾದಂತಾಗಿದೆ.