ಶ್ರೀಲಂಕಾದ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿದೆ. ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದ ಸಾವನ್ನಪ್ಪಿದ್ದಾರೆ
ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ತಮ್ಮ ಸರ್ಕಾರದ ಆರ್ಥಿಕತೆ ವಿಫಲತೆ ವಿರುದ್ಧ ಪ್ರತಿಭಟನೆಗಳ ನಡುವೆ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಬ್ಬರು ಕ್ಯಾಬಿನೆಟ್ ಸಚಿವರು ಸಹ ತಮ್ಮ ರಾಜೀನಾಮೆಯನ್ನು ಘೋಷಿಸಿದ್ದಾರೆ.
76 ವರ್ಷದ ಪ್ರಧಾನಿ ಮಹಿಂದಾ ಅವರು ತಮ್ಮ ರಾಜೀನಾಮೆ ಪತ್ರವನ್ನು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರಿಗೆ ಕಳುಹಿಸಿದ್ದಾರೆ. ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರ ಕಚೇರಿಯ ಹೊರಗೆ ಘರ್ಷಣೆ ನಡೆದು 23 ಮಂದಿ ಗಾಯಗೊಂಡಿದ್ದು, ತಕ್ಷಣವೇ ಜಾರಿಗೆ ಬರುವಂತೆ ಇಡೀ ಶ್ರೀಲಂಕಾದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಹಿಂಸಾಚಾರದಲ್ಲಿ ಆಡಳಿತ ಪಕ್ಷದ ಸಂಸದರೂ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.