
ಬೆಂಗಳೂರು: ಖ್ಯಾತ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ಕರ್ನಾಟಕದಲ್ಲಿ ಬರೋಬ್ಬರಿ 1000ಕೋಟಿಗೂ ಅಧಿಕ ಬೃಹತ್ ಹೂಡಿಕೆ ಮಾಡಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ವಿಶ್ವವಿಖ್ಯಾತ ಸ್ಪಿನ್ ಬೌಲರ್ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ತಮ್ಮ ಕ್ರಿಕೆಟ್ ನಿವೃತ್ತಿ ಬಳಿಕ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಈಗಾಗಲೇ ತಮ್ಮ ದೇಶದಲ್ಲಿ ತಂಪು ಪಾನೀಯ ಉತ್ಪಾದನಾ ಘಟಕವನ್ನು ಹೊಂದಿದ್ದಾರೆ. ತಮ್ಮ ವಹಿವಾಟನ್ನು ಮತ್ತಷ್ಟು ವಿಸ್ತರಿಸುವ ಸಲುವಾಗಿ ನಮ್ಮ ಕರ್ನಾಟಕವನ್ನು ಆಯ್ಕೆಮಾಡಿಕೊಂಡಿರುವುದು ಸಂತಸದ ಸಂಗತಿ ಎಂದು ಸಚಿವರು ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಉತ್ಪಾದನಾ ಘಟಕ ಸ್ಥಾಪಿಸುತ್ತಿದ್ದು, ಆರಂಭದಲ್ಲಿ ರೂ. 250 ಕೋಟಿ ಹೂಡಿಕೆ ಮಾಡಲು ನಿರ್ಧರಿಸಿದ್ದರು, ಆದರೆ ರೂ. 1,000 ಕೋಟಿ ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ ರೂ. 1,400 ಕೋಟಿ ತಲುಪುವ ನಿರೀಕ್ಷೆಗಳಿವೆ. ಇದೇ ಸಂದರ್ಭದಲ್ಲಿ ಧಾರವಾಡದಲ್ಲಿ ಘಟಕ ಸ್ಥಾಪನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಉತ್ತರಿಸಿದರು. ಸಣ್ಣ ಪುಟ್ಟ ಸಮನ್ವಯಕ್ಕೆ ಸಂಬಂಧಿಸಿದಂತೆ ಈದಿನ ಚರ್ಚೆಗಳು ನಡೆಯಿತು. ಅಗತ್ಯದ ನೆರವು ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿವರಿಸಿದ್ದಾರೆ.
ಮಾತುಕತೆಯ ವೇಳೆ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.