
ಹಾವೇರಿ: ಆಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಶ್ರೀ ರಾಮನ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಲು ಮುಂದಾಗಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಬಸ್ ನಿಲ್ದಾಣ ಎದುರು ಸೋಮವಾರ ಗಣೇಶೋತ್ಸವ ಆಚರಿಸುವ ಸ್ಥಳದಲ್ಲಿ ಶ್ರೀ ರಾಮನ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಲು ಮುಂದಾಗಿದ್ದ ಆರ್.ಎಸ್.ಎಸ್. ಮತ್ತು ಹಿಂದೂ ಸಂಘಟನೆಯ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೂಜೆಗೆ ಅನುಮತಿ ಪಡೆಯದ ಕಾರಣಕ್ಕೆ ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಗಿದೆ.