![](https://kannadadunia.com/wp-content/uploads/2021/12/Sunil-Kumar-e1631161126126.jpg)
ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ರಾಮಭಕ್ತರನ್ನು ಬಂಧಿಸಲು ಹೊರಟಿದೆ. ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಅವರ ಬಂಧನದಿಂದ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿ ಸ್ಪಷ್ಟವಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.
ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ರಾಮ ಮಂದಿರ ನಿರ್ಮಾಣವಾಗಬೇಕೆಂದು ತೀರ್ಪು ಕೊಟ್ಟ ನಂತರವೂ ಸಹ ರಾಮಭಕ್ತರ ಮೇಲೆ ಪ್ರಕರಣ ದಾಖಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂದೂ ವಿರೋಧಿ ನಿಲುವು ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.