alex Certify ‘ಶ್ರೀಕಾಂತ್ ಪೂಜಾರಿ’ ಶ್ರೀರಾಮನಂತೆ ಅವತಾರ ಪುರುಷ ಅಲ್ಲ, ಆತ ಕ್ರಿಮಿನಲ್ : ಸಚಿವ ದಿನೇಶ್ ಗುಂಡೂರಾವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಶ್ರೀಕಾಂತ್ ಪೂಜಾರಿ’ ಶ್ರೀರಾಮನಂತೆ ಅವತಾರ ಪುರುಷ ಅಲ್ಲ, ಆತ ಕ್ರಿಮಿನಲ್ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಅವತಾರ ಪುರುಷನೂ ಅಲ್ಲ, ಆತ ಕ್ರಿಮಿನಲ್ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು , ಹಳೆಯ ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀಕೃಷ್ಣನಂತೆ ಅವತಾರ ಪುರುಷನೂ ಅಲ್ಲ. ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ‌. ಶ್ರೀಕಾಂತ್ ಪೂಜಾರಿ ವಿರುದ್ಧ 1992 ರಿಂದ 2014 ರವರೆಗೆ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ಸುಮಾರು 16 ಕ್ರಿಮಿನಲ್ ಪ್ರಕರಣ ದಾಖಲಾಗಿವೆ‌. ಇಂತಹ ಕ್ರಿಮಿನಲ್ ಹಿನ್ನೆಲೆಯಿರುವ ವ್ಯಕ್ತಿ ರಾಮಭಕ್ತ ಎಂಬ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೆ.? ಎಂದಿದ್ದಾರೆ.

ರಾಜಕೀಯ ಕಾರಣಗಳಿಗಾಗಿ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಯ ಬೆಂಬಲಕ್ಕೆ ನಿಂತಿರುವ ರಾಜ್ಯ BJP ನಾಯಕರಿಗೆ ಮಾನ,ಮರ್ಯಾದೆ ಮತ್ತು ಸಂಸ್ಕಾರವೇ ಇಲ್ಲದಂತಾಗಿದೆ. ದೀರ್ಘಾವಧಿಯಿಂದ ಬಾಕಿ ಉಳಿದಿರುವ ಪ್ರಕರಣಗಳ‌ ವಿಚಾರಣಾ ಪ್ರಮಾಣಪತ್ರವನ್ನು ನ್ಯಾಯಾಲಯ ಕೇಳಿದೆ. ಅದರಂತೆ‌ ಪೊಲೀಸರು ಇತ್ಯರ್ಥವಾಗದ ಹಳೆಯ ಪ್ರಕರಣ ಸಂಬಂಧ ಶ್ರೀಕಾಂತ್ ಪೂಜಾರಿ ಹೆಸರಿದ್ದುದರಿಂದ ಬಂಧಿಸಿದ್ದಾರೆ. ನ್ಯಾಯಾಲಯದ ಸೂಚನೆಯ ಅನುಸಾರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಈ ವಿಚಾರ ತಿಳಿದಿದ್ದರೂ ರಾಜ್ಯ BJP ನಾಯಕರು ಕ್ರಿಮಿನಲ್ ಪರ ಪ್ರತಿಭಟನೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...