ಬೆಂಗಳೂರು: ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಆಧುನಿಕ ಶಿಕ್ಷಣ ನೀಡಲಾಗುವುದು ಎಂದು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ತಿಳಿಸಿದ್ದಾರೆ.
ಧಾರ್ಮಿಕ ಬೋಧನೆಯ ಜೊತೆಯಲ್ಲೇ ಇಂಗ್ಲಿಷ್, ವಿಜ್ಞಾನ, ಗಣಿತ ಪಠ್ಯವನ್ನು ಬೋಧಿಸಲಾಗುತ್ತದೆ. ಶಿಕ್ಷಣ ಮುಗಿಸಿ ಬರುವ ಮಕ್ಕಳು ಐಟಿಐನಂತಹ ಕೌಶಲ್ಯಾಧಾರಿತ ಶಿಕ್ಷಣ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಎಸ್ಎಸ್ಎಲ್ಸಿ ತತ್ಸಮಾನ ಆಧುನಿಕ ಶಿಕ್ಷಣ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಮುಸ್ಲಿಂ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಶೈಕ್ಷಣಿಕ ಗುಣಮಟ್ಟ ಹೆಚ್ಚಳ ಮಾಡಲಾಗುವುದು. ಉದ್ಯೋಗ ಆಧಾರಿತ ಶಿಕ್ಷಣ ನೀಡಲಾಗುವುದು. ರಾಜ್ಯದಲ್ಲಿ ಸುಮಾರು 800ಕ್ಕೂ ಹೆಚ್ಚು ಮದರಸಾಗಳಿದ್ದು, ಆಧುನಿಕ ಶಿಕ್ಷಣ ನೀಡಲಾಗುವುದು ಎಂದು ತಿಳಿಸಿದ್ದಾರೆ.