
ಬೆಂಗಳೂರು: ಸಂಸದ ಶ್ರೀನಿವಾಸ ಪ್ರಸಾದ್ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಕೇಂದ್ರದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರು ಆಪರೇಷನ್ ಕಮಲದ ಹಣದ ವಹಿವಾಟಿನ ಬಗ್ಗೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ.
ಸಂಸದರು ನೀಡಿದ ಹಣದ ವಹಿವಾಟಿನ ಹೇಳಿಕೆ ಬಗ್ಗೆ ಪ್ರಕರಣ ಕೇಸ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರು ದೂರು ನೀಡಿದ್ದು, ಆಪರೇಷನ್ ಕಮಲ, ಚುನಾವಣೆ ವೇಳೆ ವಿಶ್ವನಾಥ್ 15 ಕೋಟಿ ರೂ. ಪಡೆದಿದ್ದರು ಎಂದು ಸಂಸದ ಶ್ರೀನಿವಾಸ ಪ್ರಸಾದ್ ನೀಡಿದ ಹೇಳಿಕೆ ಬಗ್ಗೆ ದೂರು ದಾಖಲಿಸಿ ತನಿಖೆ ನಡೆಸುವಂತೆ ಕೋರಲಾಗಿದೆ.