ಬೆಂಗಳೂರು: ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ವಿ. ಶ್ರೀನಿವಾಸ ಪ್ರಸಾದ್ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.
ಇತ್ತೀಚೆಗಷ್ಟೇ ಶ್ರೀನಿವಾಸ ಪ್ರಸಾದ್ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯ ವಿಚಾರಿಸಲು ಸಿಎಂ ಸಿದ್ಧರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಈ ನಡುವೆ ಶ್ರೀನಿವಾಸ ಪ್ರಸಾದ್ ಗೆ ಅಂತಿಮ ನಮನಗಳು ಎಂದು ಪೋಸ್ಟ್ ಹಾಕಿ ಸಂತಾಪ ಸೂಚಿಸಲಾಗಿದೆ. ಆದರೆ, ಶ್ರೀನಿವಾಸ ಪ್ರಸಾದ್ ಅವರ ಆರೋಗ್ಯ ಸ್ಥಿರವಾಗಿದ್ದು, ದಯವಿಟ್ಟು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಬೆಂಬಲಿಗರು ತಿಳಿಸಿದ್ದಾರೆ.