
ಮುಂಬರುವ ವಿಧಾನಸಭಾ ಚುನಾವಣೆಗೆ ಜಾತ್ಯಾತೀತ ಜನತಾದಳ ಭರ್ಜರಿ ತಯಾರಿ ನಡೆಸುತ್ತಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಈಗಾಗಲೇ ಪಂಚರತ್ನ ರಥಯಾತ್ರೆಯನ್ನು ಆರಂಭಿಸಿದ್ದಾರೆ.
ಡಿಸೆಂಬರ್ 16ರ ಶುಕ್ರವಾರದಂದು ಪಂಚರತ್ನ ರಥ ಯಾತ್ರೆ ರಾಮನಗರ ಪ್ರವೇಶ ಮಾಡಲಿದ್ದು, ಇದೇ ದಿನದಂದು ಕುಮಾರಸ್ವಾಮಿಯವರು 63ನೇ ವಸಂತಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ರಾಮನಗರದಲ್ಲಿ ಅದ್ದೂರಿ ಶ್ರೀನಿವಾಸ ಕಲ್ಯಾಣೋತ್ಸವ ಹಮ್ಮಿಕೊಳ್ಳಲಾಗಿದೆ.
ಪಕ್ಷಾತೀತವಾಗಿ ಈ ಕಾರ್ಯಕ್ರಮ ನಡೆಯಲಿದ್ದು, ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ ಆಚರಣೆಗಾಗಿ ಬೃಹತ್ ವೇದಿಕೆ ಸಿದ್ಧವಾಗುತ್ತಿದೆ. ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಟಿಟಿಡಿ ಪ್ರಧಾನ ಪುರೋಹಿತರ ನೇತೃತ್ವದಲ್ಲಿಯೇ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದ್ದು, ತಿರುಮಲದಿಂದಲೇ ಮೂಲ ದೇವರ ಉತ್ಸವ ಮೂರ್ತಿಗಳನ್ನು ತರಲಾಗುತ್ತಿದೆ.