alex Certify BIG NEWS: ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ್ ಗಂಭೀರ: ಪತ್ನಿ ಸೇರಿ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ್ ಗಂಭೀರ: ಪತ್ನಿ ಸೇರಿ ಇಬ್ಬರು ಸಾವು

ಕಾರವಾರ: ಉತ್ತರ ಗೋವಾ ಸಂಸದ ಹಾಗೂ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಸಚಿವರ ಪತ್ನಿ ಹಾಗೂ ಅವರ ಆಪ್ತ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊಸಕಂಬಿ ಬಳಿ ಸೋಮವಾರ ರಾತ್ರಿ ಅಪಘಾತ ಸಂಭವಿಸಿದೆ. ಸಚಿವರ ಪತ್ನಿ ವಿಜಯ ಶ್ರೀಪಾದ್ ನಾಯಕ್ ಹಾಗೂ ಮಹಾರಾಷ್ಟ್ರದ ಆರೆಸ್ಸೆಸ್ ಮುಖಂಡ ದೀಪಕ್ ರಾಮದಾಸ್ ಗಣಮೆ ಸಾವನ್ನಪ್ಪಿದ್ದಾರೆ.

ಶ್ರೀಪಾದ್ ನಾಯ್ಕ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಗೋವಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಮಾಹಿತಿ ತಿಳಿದು ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಉತ್ತಮ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಯಲ್ಲಾಪುರ ತಾಲೂಕಿನ ಗಂಟೆ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಚಿವರು ಗೋಕರ್ಣದತ್ತ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಶ್ರೀಪಾದ ನಾಯಕ್ ಮತ್ತು ಅವರೊಂದಿಗಿದ್ದ ಮೂವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...