ಬೆಳಗಾವಿ: ಶ್ರೀರಾಮ ಸೇನೆ ಕಾರ್ಯಕರ್ತ ಸೇರಿದಂತೆ ಇಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ.
ಕ್ಷುಲ್ಲಕ ವಿಚಾರಕ್ಕೆ ಹೊಡೆದಾಟ ನಡೆದು, ಶ್ರೀರಾಮ ಸೇನೆ ಕಾರ್ಯಕರ್ತ ಗೋಪಾಲ ಬಂಡಿವಡ್ಡರ್ ಗೆ ಚಾಕುವಿನಿಂದ ಇರಿಯಲಾಗಿದೆ. ರವಿ ಬಂಡಿವಡ್ಡರ್ ತಲೆಗೆ ರಾಡ್ ನಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಜಗಳ ಬಿಡಿಸಲು ಬಂದ ನಂಜುಂಡಿ ಸಾಬಣ್ಣ ಬಂಡಿವಡ್ಡರ್ ಮೇಲೆ ಹಲ್ಲೆ ಮಾಡಲಾಗಿದೆ. ಮೂವರು ಗಾಯಾಳುಗಳಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಅಮೀನ್ ಜಂಗಲ್ ಶೇಕ್ ಮತ್ತು ಸಹಚರರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದ್ದು, ತಾಲ್ಲೂಕು ಆಸ್ಪತ್ರೆ ಎದುರು ಗಾಯಾಳುಗಳ ಸಂಬಂಧಿಕರು ಜಮಾವಣೆಗೊಂಡಿದ್ದಾರೆ. ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.