alex Certify BIG NEWS: ಮೊಳಕಾಲ್ಮೂರು ಕ್ಷೇತ್ರದಿಂದಲೇ ಮತ್ತೆ ಸ್ಪರ್ಧಿಸಲಿದ್ದಾರೆ ಸಚಿವ ಶ್ರೀರಾಮುಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೊಳಕಾಲ್ಮೂರು ಕ್ಷೇತ್ರದಿಂದಲೇ ಮತ್ತೆ ಸ್ಪರ್ಧಿಸಲಿದ್ದಾರೆ ಸಚಿವ ಶ್ರೀರಾಮುಲು

ಚಿತ್ರದುರ್ಗ: 2023ರ ಚುನಾವಣೆಯಲ್ಲೂ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಕೋನಾಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಶ್ರೀರಾಮುಲು ಅವರು, ಮುಂದಿನ ಚುನಾವಣೆಯಲ್ಲಿಯೂ ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದು, ಇನ್ನೊಂದು ಬಾರಿ ಅವಕಾಶ ಮಾಡಿಕೊಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ.

ಈ ಹಿಂದಿನ ಶಾಸಕರಿಗಿಂತ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಮಾಡಿದ್ದೇನೆ. ಇನ್ನೊಂದು ಬಾರಿ ಗೆಲ್ಲಿಸಿರಿ. ಬಾಕಿ ಉಳಿದ ಕೆಲಸವನ್ನು ಮಾಡಿಕೊಡುತ್ತೇನೆ. ಬಳಿಕ ಈ ಜಿಲ್ಲೆಯಿಂದ ಹೊರಗೆ ಹೋಗುತ್ತೇನೆ ಎಂದು ಶ್ರೀರಾಮುಲು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...