
ಚಿಕ್ಕಬಳ್ಳಾಪುರ: ಪಿಪಿಪಿ ಮಾದರಿಯಲ್ಲಿ ನೂತನ ಬಸ್ ಗಳನ್ನು ರಸ್ತೆಗಿಳಿಸುವ ಪ್ರಸ್ತಾವನೆ ಇದೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಸಾರಿಗೆ ಇಲಾಖೆಯಲ್ಲಿ ವೇತನ ಪರಿಷ್ಕರಣೆ ಮಾಡಲಾಗುವುದು. ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಸಾರಿಗೆ ಇಲಾಖೆ ನೌಕರರು ಮುಷ್ಕರಕ್ಕೆ ಮುಂದಾಗಬೇಡಿ ಎಂದು ಅವರು ಹೇಳಿದರು.
ಪಿಪಿಪಿ ಮಾದರಿಯಲ್ಲಿ ನೂತನ ಬಸ್ ಗಳನ್ನು ರಸ್ತೆಗಿಳಿಸುವ ಬಗ್ಗೆ ಅವರು ಹೇಳಿರುವುದು ಸಾರಿಗೆ ಇಲಾಖೆಯನ್ನು ಸಚಿವರು ಖಾಸಗೀಕರಣ ಮಾಡುತ್ತಾರೆಯೇ ಎಂದೆಲ್ಲ ಚರ್ಚೆಯಾಗಿದೆ ಎನ್ನಲಾಗಿದೆ.