alex Certify ಆಪ್ತ ಸಹಾಯಕನ ಕುಟುಂಬಕ್ಕೆ ಸಚಿವ ಶ್ರೀರಾಮುಲು ವಿಶೇಷ ಕೊಡುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಪ್ತ ಸಹಾಯಕನ ಕುಟುಂಬಕ್ಕೆ ಸಚಿವ ಶ್ರೀರಾಮುಲು ವಿಶೇಷ ಕೊಡುಗೆ

ಬಳ್ಳಾರಿ: ಸಚಿವ ಬಿ. ಶ್ರೀರಾಮುಲು ಅವರು ತಮ್ಮ ಆಪ್ತ ಸಹಾಯಕನ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಟ್ಟಿದ್ದಾರೆ. ಬಳ್ಳಾರಿಯ ಅವಂಬಾವಿಯಲ್ಲಿ 50 ಲಕ್ಷ ರೂಪಾಯಿ ಮೌಲ್ಯದ ಮನೆ ನಿರ್ಮಿಸಿ ಕೊಡುವ ಮೂಲಕ ತಮ್ಮ ಆಪ್ತ ಸಹಾಯಕ ಮಹೇಶ್ ರೆಡ್ಡಿ ಕುಟುಂಬದವರಿಗೆ ಗಿಫ್ಟ್ ನೀಡಿದ್ದಾರೆ.

ಮಹೇಶ್ ರೆಡ್ಡಿ ಸುಮಾರು 20 ವರ್ಷಗಳಿಂದ ಶ್ರೀರಾಮುಲು ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ವರ್ಷ ಬೆಂಗಳೂರಿನಲ್ಲಿ ಅಕಾಲಿಕವಾಗಿ ನಿಧನರಾಗಿದ್ದರು. ಶ್ರೀರಾಮುಲು ಬಳ್ಳಾರಿಯ ತಮ್ಮ ಆಪ್ತರೊಂದಿಗೆ ಸಭೆ ನಡೆಸಿ ಮಹೇಶ್ ರೆಡ್ಡಿ ಕುಟುಂಬದವರಿಗೆ ಮನೆ ನಿರ್ಮಿಸಿ ಕೊಡುವುದಾಗಿ ಹೇಳಿದ್ದು, ಅಂತೆಯೇ 15 ಲಕ್ಷ ರೂಪಾಯಿ ಮೌಲ್ಯದ ಸೈಟ್ ಖರೀದಿಸಿ 35 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡಲಾಗಿದೆ. ಇದಕ್ಕೆ ಬಿ. ಶ್ರೀರಾಮುಲು ನಿಲಯ ಎಂದು ಹೆಸರಿಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...