ಯಾದಗಿರಿ: ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ನಾನು ಇರುತ್ತೇನೆಯೋ ಇಲ್ಲವೋ ಗೊತ್ತಿಲ್ಲ. ನಾನು ರಾಜಕಾರಣದಲ್ಲಿ ಇಲ್ಲದ ಸಂದರ್ಭದಲ್ಲಿ ನಮ್ಮ ಸಮುದಾಯವನ್ನು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ರಾಜೂಗೌಡ ಮತ್ತು ಶಿವನಗೌಡರ ಮೇಲಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಯಾದಗಿರಿ ಜಿಲ್ಲೆ ಹುಣಸಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. ಮುಂದಿನ ದಿನಗಳಲ್ಲಿ ನಾನು ರಾಜಕೀಯದಲ್ಲಿ ಇರುತ್ತೇನೆಯೋ ಇಲ್ಲವೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ರಾಜಕೀಯದಲ್ಲಿ ನಾನು ಇಲ್ಲದಂತಹ ಸಂದರ್ಭದಲ್ಲಿ ನಮ್ಮ ಸಮುದಾಯವನ್ನು ಮುನ್ನಡೆಸಿಕೊಂಡು ಹೋಗುವ ನಾಯಕತ್ವ ರಾಜೂಗೌಡ ಮತ್ತು ಶಿವನಗೌಡ ಅವರದ್ದಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿಯೇ ಶ್ರೀರಾಮುಲು ಈ ರೀತಿ ಹೇಳಿಕೆ ನೀಡಿರುವುದು ಅಚ್ಚರಿ ಮೂಡಿಸಿದ್ದು, ಚರ್ಚೆಗೆ ಕಾರಣವಾಗಿದೆ.