ಬಳ್ಳಾರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಮತ್ತೆ ತೊಡೆ ತಟ್ಟಿದ್ದಾರೆ.
ಬಳ್ಳಾರಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ನಿರ್ಧರಿಸಿದ್ದಾರೆ. ನಾನು ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಶ್ರೀರಾಮುಲು ಅವರೊಂದಿಗೂ ಚರ್ಚೆ ನಡೆಸಿದ್ದೆ. ಯಡಿಯೂರಪ್ಪ ಬಳಿ ಹೋಗೋಣ ಎಂದು ಶ್ರೀರಾಮುಲು ಹೇಳಿದ್ದರು. ನನ್ನ ಜೊತೆ ಚರ್ಚೆ ಮಾಡದೆ ಶ್ರೀರಾಮುಲು ಅವರಿಗೆ ಟಿಕೆಟ್ ಘೋಷಿಸಿದ್ದಾರೆ. ಹಾಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ತಿಪ್ಪೇಸ್ವಾಮಿ ಹೇಳಿದ್ದಾರೆ.
ಈ ಹಿಂದೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಶಾಸಕರಾಗಿದ್ದ ತಿಪ್ಪೇಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿ ಶ್ರೀರಾಮುಲು ಸ್ಪರ್ಧಿಸಿದ್ದರು. ತಿಪ್ಪೇಸ್ವಾಮಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.