
ಸುಕುಮಾರ್ ನಿರ್ದೇಶನದ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ ಡಿಸೆಂಬರ್ 17ರಂದು ತೆರೆಮೇಲೆ ಬರಲಿದ್ದು ಇಂದು ಈ ಚಿತ್ರದ ಎರಡನೇ ಹಾಡನ್ನು ಲಹರಿ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಚೂಪೆ ಬಂಗಾರಂ ಆಯನೆ ಶ್ರೀವಲ್ಲಿ’ ಎಂಬ ಈ ಹಾಡಿಗೆ ಸಿದ್ ಶ್ರೀರಾಮ್ ಧ್ವನಿಯಾಗಿದ್ದು, ದೇವಿಶ್ರೀ ಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದಾರೆ.
ಕನ್ನಡದಲ್ಲೂ ಈ ಹಾಡು ರಿಲೀಸ್ ಆಗಿದ್ದು ‘ನೋಟ ಬಂಗಾರವಾಯಿತೇ ಶ್ರೀವಲ್ಲಿ ಮಾತೆ ಮಾಣಿಕ್ಯವಾಯಿತೆ’ ಎಂಬ ಸಾಲಿನಿಂದ ಶುರುವಾಗುವ ಈ ಹಾಡು ತುಂಬಾ ಸೊಗಸಾಗಿ ಮೂಡಿಬಂದಿದೆ.
ಜಂಬೂಸವಾರಿಯಲ್ಲಿ ಭಾಗವಹಿಸಲು ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ
ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದಾರೆ. ಫಹಾಧ್ ಫಾಸಿಲ್ ಜಗಪತಿ ಬಾಬು, ಪ್ರಕಾಶ್ ರಾಜ್ ಸುನಿಲ್ ಅನುಸೂಯ ಭಾರದ್ವಾಜ್ ಸೇರಿದಂತೆ ಕನ್ನಡದ ಡಾಲಿ ಧನಂಜಯ್ ಕೂಡ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.