
ದಾವಣಗೆರೆ: ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎರಡು ಲಕ್ಷ ರೂಪಾಯಿ ಏಕೆ ಕಟ್ಟಬೇಕು ಎಂದು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಪ್ರಶ್ನಿಸಿದ್ದಾರೆ.
ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಭಾರತ್ ಜೋಡೋ ಸಂವಿಧಾನ ಬಚಾವೋ ಪಾದಯಾತ್ರೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಮಾಣಿಕರಾಗಿರುವ ನಾವು ಎರಡು ಲಕ್ಷ ರೂ. ಕಟ್ಟಬಾರದು ಎಂದು ಹೇಳಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಕೋರಿ ಅರ್ಜಿ ಸಲ್ಲಿಸುತ್ತೇನೆ. ಪ್ರಾಮಾಣಿಕರಾಗಿರುವ ನಾವು ಏಕೆ ಎರಡು ಲಕ್ಷ ರೂಪಾಯಿ ಕಟ್ಟಬೇಕು ಎಂದು ಕೇಳುತ್ತಿದ್ದೇನೆ. ಟಿಕೆಟ್ ಆಕಾಂಕ್ಷಿಗಳು ಅರ್ಜಿಯ ಜೊತೆಗೆ ಎರಡು ಲಕ್ಷ ರೂ. ಏಕೆ ಕಟ್ಟಬೇಕು ಎಂದು ಅವರು ಪ್ರಶ್ನಿಸಿದ್ದಾರೆ.