
ದಾವಣಗೆರೆ: ದಾವಣಗೆರೆಯಲ್ಲಿ ಶೀಘ್ರವೇ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.
ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ಸೇರಿಸಿ ಪ್ರತ್ಯೇಕ ಹಾಲು ಒಕ್ಕೂಟ ರಚನೆ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬಿಜೆಪಿ ಅವಧಿಯಲ್ಲಿ ಯಾವುದೇ ರೀತಿಯ ಪ್ರಯತ್ನಗಳು ನಡೆದಿರಲಿಲ್ಲ. ಈಗ ಪ್ರತ್ಯೇಕ ಹಾಲು ಒಕ್ಕೂಟ ರಚಿಸಲಾಗುವುದು. ಹಸು ಖರೀದಿಗೆ ತಲಾ 40,000 ರೂ. ಸಬ್ಸಿಡಿ ನೀಡಲಾಗುವುದು. 5ರಿಂದ 10 ಸಾವಿರ ಹಸುಗಳನ್ನು ರೈತರಿಗೆ ಕೊಡಿಸುವ ಗುರಿ ಇದೆ ಎಂದು ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.