alex Certify ಸಚಿವರಿಂದ ಆಕ್ಷೇಪಾರ್ಹ ಪದ ಬಳಕೆ: ದೂರು ನೀಡಿದರೂ ಪ್ರಕರಣ ದಾಖಲಿಸಲು ಹಿಂದೇಟು ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವರಿಂದ ಆಕ್ಷೇಪಾರ್ಹ ಪದ ಬಳಕೆ: ದೂರು ನೀಡಿದರೂ ಪ್ರಕರಣ ದಾಖಲಿಸಲು ಹಿಂದೇಟು ಆರೋಪ

ಬೆಂಗಳೂರು: ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನಾ ಸಮಿತಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದೆ.

ಸಂದರ್ಶನ ಒಂದರಲ್ಲಿ ಸಚಿವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದು, ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ದೂರು ಸ್ವೀಕರಿಸಿಲ್ಲ. ದೂರು ಸ್ವೀಕರಿಸಿ ಮೊಕದ್ದಮೆ ದಾಖಲಿಸಲು ವಿಧಾನಸೌಧ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ದೂರು ದಾಖಲಿಸುವುದಾಗಿ ಸಮಯ ಕಳೆಯುತ್ತಿದ್ದಾರೆ. ದೂರು ಸ್ವೀಕರಿಸದಿದ್ದರೆ ನೇರವಾಗಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಸಮಿತಿಯ ಮುಖಂಡರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...