ಬೆಂಗಳೂರು: ಭಾರತ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗ(ಎಸ್.ಎಸ್.ಸಿ)ವು ಖಾಲಿ ಇರುವ ತಾಂತ್ರಿಕೇತರ ಬಹುಕಾರ್ಯ ಹುದ್ದೆಗಳು(ಮಲ್ಟಿ ಟಾಸ್ಕಿಂಗ್ ಸ್ಟಾಫ್) ಹಾಗೂ ಹವಾಲ್ದಾರ್ ಹುದ್ದೆಗಳ ಭರ್ತಿಗಾಗಿ ಮೆಟ್ರಿಕ್ಯುಲೇಷನ್(ಎಸ್.ಎಸ್.ಎಲ್.ಸಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಹವಾಲ್ದಾರ್ ಹುದ್ದೆಗಳಿಗೆ ಮಾತ್ರ ದೈಹಿಕ ಸಾಮಥ್ರ್ಯ ಪರೀಕ್ಷೆ ಮತ್ತು ದೈಹಿಕ ಪ್ರಮಾಣ ಪರೀಕ್ಷೆ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ www.ssckkr.kar.nic.in ಅಥವಾ https://ssc.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿರುತ್ತದೆ.
ಸಿಬ್ಬಂದಿ ನೇಮಕಾತಿ ಆಯೋಗ ಕಳೆದ ಹತ್ತು ದಿನಗಳ ಹಿಂದೆ ಹೊರಡಿಸಲಾದ ಅಧಿಸೂಚನೆ ಪ್ರಕಾರ ಮಲ್ಟಿ ಟಾಸ್ಕಿಂಗ್ ಸ್ಟಾಫ್ ನಾನ್ ಟೆಕ್ನಿಕಲ್, ಹವಾಲ್ದಾರ್ ಹುದ್ದೆಯ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲೂ ಬರೆಯಲು ಅವಕಾಶ ನೀಡಲಾಗಿದೆ.
ಪರೀಕ್ಷೆಗೆ ದಿನಾಂಕ 30-6-2023ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ. ಅರ್ಜಿ ಸ್ವೀಕರಿಸುವ ಅಂತಿಮ ದಿನಾಂಕ 21-07-2023 (23:00 ಗಂಟೆಯವರೆಗೆ) ಪರೀಕ್ಷೆಗೆ ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.
ಮಲ್ಟಿ ಟಾಸ್ಕಿಂಗ್ ಸ್ಟಾಫ್ ನಾನ್ ಟೆಕ್ನಿಕಲ್ ಒಟ್ಟು ಹುದ್ದೆಗಳು -1198
ಹವಾಲ್ದಾರ್ ಒಟ್ಟು ಹುದ್ದೆಗಳು – 360
ಪರೀಕ್ಷೆ ನಡೆಯುವ ಸ್ಥಳಗಳು: ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ.
ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ www.ssckkr.kar.nic.in ಅಥವಾ https://ssc.nic.in ಸಂಪರ್ಕಿಸಬಹುದು