ಸಿಬ್ಬಂದಿ ನೇಮಕಾತಿ ಆಯೋಗ ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದೆ. 11,400 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಕನ್ನಡದಲ್ಲಿಯೂ ನೇಮಕಾತಿ ಪರೀಕ್ಷೆ ನಡೆಯಲಿದೆ.
ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಸಿಬ್ಬಂದಿ ನೇಮಕಾತಿ ಆಯೋಗದಿಂದ ನೇಮಕಾತಿ ಪರೀಕ್ಷೆ ನಡೆಯಲಿದೆ. ಈ ಮೂಲಕ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆ ನಡೆಸಬೇಕೆಂಬ ಹೋರಾಟಕ್ಕೆ ಮೊದಲ ಯಶಸ್ಸು ಸಿಕ್ಕಿದೆ.
ಇದೇ ಮೊದಲ ಬಾರಿಗೆ ಸಿಬ್ಬಂದಿ ನೇಮಕಾತಿ ಆಯೋಗ ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಮುಂದಾಗಿದೆ. ಇದುವರೆಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನೇಮಕಾತಿ ಪರೀಕ್ಷೆ ನಡೆಯುತ್ತಿತ್ತು. ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ ಕನ್ನಡ ಸೇರಿ 13 ಭಾಷೆಗಳಲ್ಲಿ ಪರೀಕ್ಷೆಗೆ ಅವಕಾಶ ನೀಡಿದೆ. ಸುಮಾರು 11,400 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಬಹುದಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗ 10880 ಎಂಟಿಎಸ್ ಹುದ್ದೆಗಳು, 529 ಸಿಬಿಐಸಿ, ಸಿಬಿಎನ್ ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.