alex Certify ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್​ ನ್ಯೂಸ್​: ಸಿಬ್ಬಂದಿ ನೇಮಕಾತಿ ಆಯೋಗದಿಂದ 3 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್​ ನ್ಯೂಸ್​: ಸಿಬ್ಬಂದಿ ನೇಮಕಾತಿ ಆಯೋಗದಿಂದ 3 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗವು 2021ನೇ ಸಾಲಿನ 9ನೇ ಹಂತದ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗೂ ಈ ಸಂಬಂಧ ಅಧಿಸೂಚನೆಯನ್ನು ನೀಡಿದೆ. ಆಸಕ್ತ ಅಭ್ಯರ್ಥಿಗಳು ಎಸ್​ಎಸ್​ಸಿ ಅಧಿಕೃತ ವೆಬ್​ಸೈಟ್​ https://ssc.nic.in/ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್​ 25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 3261 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಶುಲ್ಕ : ಅಭ್ಯರ್ಥಿಗಳು 100 ರೂಪಾಯಿ ಶುಲ್ಕವನ್ನು ನೆಟ್​ ಬ್ಯಾಂಕಿಂಗ್​ ಅಥವಾ ಬಿಹೆಚ್​ಐಎಂ ಯುಪಿಐ ಅಥವಾ ಎಸ್​ಬಿಐ ಚಲನ್​ ಮೂಲಕ ತುಂಬಬಹುದಾಗಿದೆ. ಮಹಿಳಾ ಅಭ್ಯರ್ಥಿಗಳು, ಎಸ್​ಟಿ, ದಿವ್ಯಾಂಗರು. ಎಸ್ಸಿ, ನಿವೃತ್ತ ಯೋಧರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಹತಾ ಮಾನದಂಡ : ಈ ಹುದ್ದೆಗೆ ಅರ್ಜಿ ಸಲ್ಲಿಸುವವರು 10, 12 ಅಥವಾ ಪದವಿ ಉತ್ತೀರ್ಣರಾಗಿರಬೇಕು. ಈ ಬಗ್ಗೆ ವೆಬ್​ಸೈಟ್​ನಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...